ಹುಬ್ಬಳ್ಳಿ: ತಾನು ಪ್ರೀತಿಸುವ ಹುಡುಗಿ ತನ್ನೊಂದಿಗೆ ಪ್ರೀತಿಯನ್ನು ಹಂಚಿಕೊಳ್ಳುತ್ತಿಲ್ಲವೆಂದು ಬೇಸರಗೊಂಡ ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಅಮರಗೋಳದ ಬಸಯ್ಯ ವಸ್ತ್ರದ ಎಂಬ ಯುವಕ ರೈಲು ಹಳಿಗೆ ತೆಲೆ ಕೊಟ್ಟ ಸಾವನಪ್ಪಿದ ಪ್ರೇಮಿಯಾಗಿದ್ದಾನೆ. ಪಿಯುಸಿ ವ್ಯಾಸಂಗ ಮಾಡಿರುವ ಬಸಯ್ಯ, ಅಮರಗೋಳ ಪ್ರದೇಶದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿ ಬಸಯ್ಯನ ಪ್ರೀತಿಯನ್ನು ನಿರಾಕರಣೆ ಮಾಡಿದ್ದರಿಂದಲೇ ರೈಲು ಹಳಿಗೆ ತೆಲೆ ಕೊಟ್ಟು ಸಾವನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಬಾಲಕಿ ಕೆನ್ನೆ ಕಚ್ಚಿದ್ದ ಶಿಕ್ಷಕನಿಗೆ ಪೊಲೀಸರ ಮುಂದೆಯೇ ಥಳಿಸಿದ ಸ್ಥಳೀಯರು
ಬಸಯ್ಯಗೆ ಇನ್‍ಸ್ಟಾಗ್ರಾಮ್ ನಲ್ಲಿ 9 ಸಾವಿರ ಫಾಲೋವರ್ಸ್ ಹೊಂದಿದ್ದು. ಈತನ ತಂದೆ ಸಿಎಂ ಬಸವರಾಜ ಬೊಮ್ಮಾಯಿಯವರ ತಂದೆ-ತಾಯಿಯವರನ್ನು ಅಂತ್ಯಕ್ರಿಯೆ ಮಾಡಿದ ಪುತ್ಥಳಿ ಕಾವಲು ಕೆಲಸಗಾರರಾಗಿದ್ದಾರೆ. ಘಟನೆಯ ಕುರಿತು ರೈಲ್ವೇ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ