ಬೀದರ್: ಧಾರಾಕಾರ ಮಳೆಗೆ ಹಳ್ಳದಲ್ಲಿ ರೈತ ಮಹಿಳೆಯೊಬ್ಬರು ಕೊಚ್ಚಿ ಹೋದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಾಗೂರ್ ಬಿ ಗ್ರಾಮದಲ್ಲಿ ನಡೆದಿದೆ.
ಸುಮನಾ ಬಾಯಿ ರೆಡ್ಡಿ ಖಂದಾಡೆ(48) ಎಂಬ ರೈತ ಮಹಿಳೆ ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾಳೆ. ಈ ಬಗ್ಗೆ ಸುಮನಾ ಬಾಯಿ ಅವರ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಹೊಲದಿಂದ ಮನೆಗೆ ವಾಪಸ್ ಬರುವಾಗ ಮಳೆ ಅಬ್ಬರಕ್ಕೆ ಸುಮನಾ ಬಾಯಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದು, ಎಷ್ಟೇ ಹುಡುಕಿದ್ದರೂ ಪತ್ತೆ ಆಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಂದುವರಿದ ಮಳೆ- ಕೊಡಗಿನಲ್ಲಿ ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ
ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕದಳ ಸಿಬ್ಬಂದಿ ಹಲವು ಗಂಟೆಗಳಿಂದ ಸತತವಾಗಿ ಪರಿಶೀಲನೆ ಮಾಡಿದರು. ಆದರೆ ಮಹಿಳೆಯ ಮೃತದೇಹ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಠಾಣಾಕೂಸನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆಯಾಗಿದ್ದ ರೈತ ಮಹಿಳೆಯ ಮೃತದೇಹಕ್ಕಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ಜಂಟಿಯಾಗಿ ಶೋಧ ಕಾರ್ಯ ಮುಂದುವರೆದಿದೆ. ಇದನ್ನೂ ಓದಿ: ಕೇದಾರದಿಂದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಶೀರ್ವಾದ ಮಾಡಲು ಬಂದಿದ್ದೇನೆ: ಕೇದಾರ ಪೀಠದ ಜಗದ್ಗುರು