ಬೆಂಗಳೂರು: ರಾಜ್ಯದ ಹಲವೆಡೆ ಮಳೆ (Rain) ಮುಂದುವರಿಯುವ ಮುನ್ಸೂಚನೆ ಇದ್ದು, 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ 3 ಗಂಟೆಗಳಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹೀಗಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ
ಯಾವ ಜಿಲ್ಲೆಗಳಲ್ಲಿ ಅಲರ್ಟ್?
ಬೆಳಗಾವಿ, ಧಾರವಾಡ, ಗದಗ, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಇಲ್ಲ – ಬ್ಯಾನ್ ಮಾಡಲು ರಾಜ್ಯ ಸರ್ಕಾರ ನಿರ್ಧಾರ
ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಬಲವಾದ ಗಾಳಿಯಿಂದಾಗಿ ಮರದ ಕೊಂಬೆಗಳು ಬೀಳುವ ಹಾಗೂ ಕೆಲವೆಡೆ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯೂ ಇದೆ. ಇದನ್ನೂ ಓದಿ: ಕಾಕ್ಪಿಟ್ನಲ್ಲಿ ಪೈಲಟ್ನಿಂದ ಮಾರಣಾಂತಿಕ ಹಲ್ಲೆ ನಡೆದರೂ 174 ಜೀವ ರಕ್ಷಿಸಿದ್ದು ಭಾರತೀಯ ಕ್ಯಾಪ್ಟನ್!

