ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮತ್ತೆ ಮಳೆಯಾಗುವ (Rain) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಇಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 29ರಿಂದ 31ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ
- Advertisement -
- Advertisement -
ಆಗಸ್ಟ್ 29ರಿಂದ 30ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಲಾರಿ ಡಿಕ್ಕಿ ಹೊಡೆದು ಸೈಕಲ್ ಸವಾರ ಸ್ಥಳದಲ್ಲೆ ಸಾವು
- Advertisement -