ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನ ಬೆಂಗ್ಳೂರಿಗೆ (Bengaluru) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸದ್ಯ ನಗರದ ಹಲವೆಡೆ ಮಳೆ ಶುರುವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ವಿಧಾನಸೌಧ, ಚಾಲುಕ್ಯ ಸರ್ಕಲ್, ಕೆ ಆರ್ ಸರ್ಕಲ್, ಕಾರ್ಪೋರೇಷನ್ ಸರ್ಕಲ್, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.ಇದನ್ನೂ ಓದಿ: ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ – ರಾಯರೆಡ್ಡಿ ಭರವಸೆ
ಇನ್ನೂ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.