ಬೆಂಗಳೂರು: ರಾಜ್ಯಾದ್ಯಂತ (Karnataka) ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆ (Rain) ಮುಂದುವರಿದಿದೆ. ಇದೀಗ ಮತ್ತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ (Meteorological Department) ಮಳೆಯ ಅಲರ್ಟ್ ನೀಡಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: PFI ಬ್ಯಾನ್: ಹಳೇ ಕೇಸ್, ಹೊಸ ಆಟ – ಇದು ಬಿಜೆಪಿ ಗೇಮ್!
ಉತ್ತರ ಒಳನಾಡು ಹೊರತುಪಡಿಸಿ, ರಾಜ್ಯಾದ್ಯಂತ ಹಲವೆಡೆ ಸಾದಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಪಿಎಸ್‍ಐ ಮರು ಪರೀಕ್ಷೆಗೆ ಹೈಕೋರ್ಟ್ ತಡೆ