ಬೆಂಗಳೂರು: ರಾಜ್ಯದಲ್ಲಿ (Karnataka) ಮುಂದಿನ ಐದು ದಿನಗಳ ಕಾಲ ಮತ್ತೆ ಮಳೆಯಾಗುವ (Rain) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಭಾನುವಾರದಿಂದ ಆಗಸ್ಟ್ 22ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಇನ್ನು ಸೋಮವಾರ ಕರಾವಳಿ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 20 ಹಾಗೂ 21ರಂದು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಸಾರಿಗೆ ಬಸ್‍ನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‍ರೇಪ್ – ಐವರು ಕಾಮುಕರು ಅರೆಸ್ಟ್
ಇಂದಿನಿಂದ ಆಗಸ್ಟ್ 20ರವರೆಗೆ ಉತ್ತರ ಕರ್ನಾಟಕ ಭಾಗಕ್ಕೆ ಯೆಲ್ಲೋ ಅಲರ್ಟ್ ನೀಡಿದೆ. ಇಂದು (ಆ.18) ಮತ್ತು ಸೋಮವಾರ (ಆ.19) ದಕ್ಷಿಣ ಭಾಗಕ್ಕೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಹಠ ಮಾಡದೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಎ.ಮಂಜು