ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿರುವುದಾಗಿ ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆಯಾಗುವ (Rain In Karnataka) ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
Advertisement
Advertisement
ತಮಿಳುನಾಡಿನ ಕರಾವಳಿ ಭಾಗಕ್ಕೆ ವಾಯುಭಾರ ಕುಸಿತ ಬಂದು ತಲುಪಲಿದೆ. ಈ ಹಿನ್ನೆಲೆ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ. ಇದನ್ನೂ ಓದಿ; ರಾಜಸ್ಥಾನಕ್ಕೆ ಕಿಂಗ್ ಮೇಕರ್ ಆಗ್ತಾರಾ ಡಿಕೆ ಶಿವಕುಮಾರ್?
Advertisement
ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಮಳೆ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರಮರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ.
Advertisement
ಉತ್ತರ ಒಳನಾಡುಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಮೀನುಗಾರರಿಗೆ ಸಮುದ್ರ ನೀರಿಗಿಳಿಯದಂತೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ತಮಿಳುನಾಡಿನ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಅನೇಕ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ ಮತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆ ಮುಂದುವರೆಯಲಿದ್ದು, ತಿರುವಳ್ಳೂರು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.