ಕೊಡಗು: ಕೊಡಗಿನಲ್ಲಿ (Kodagu) ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆ (Heavy Rain) ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದ್ದು, ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ವಿಜಯಪುರದಲ್ಲೂ ಭಾರೀ ಮಳೆ: 
ಅತ್ತ ವಿಜಯಪುರ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುಡುಗು, ಸಿಡಿಲು ಸಮೇತ ಭಾರಿ ಮಳೆ ಆಗುತ್ತಿದೆ. ಮಳೆಗೆ ನಗರ ಜೀವನ ಅಸ್ಥವ್ಯಸ್ಥವಾಗಿದೆ. ನಗರದ ಬಡಿ ಕಮಾನ ಬಳಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಮಳೆ ನೀರಿಗೆ ರಸ್ತೆಗಳು ಮುಚ್ಚಿ ಹೋಗಿವೆ. ಬೈಕ್ ಸವಾರರು, ಆಟೋ ಸೇರಿದಂತೆ ವಾಹನ ಸವಾರರು ಓಡಾಡಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: 24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್ ಮತ್ತೆ ಬೆದರಿಕೆ
 
					
 
		 
		 
		 
		 
		 
		 
		 
		 
		