ಬೆಂಗಳೂರು: ರಾಜ್ಯದಂದು ಎಲ್ಲೆಡೆ ಭರ್ಜರಿ ಮಳೆಯಾಗಿದ್ದು (Heavy Rain), ಅಷ್ಟೇ ಅವಾಂತರವನ್ನೂ ಸೃಷ್ಟಿಸಿದೆ. ಉತ್ತರ ಕನ್ನಡದಲ್ಲಂತೂ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಅರಗಾ ಭಾಗದಲ್ಲಿ 10ಕ್ಕೂ ಹೆಚ್ಚು ಮನೆ, ಜಮೀನು ಜಲಾವೃತವಾಗಿವೆ. ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ಮಳೆಯ ಆರ್ಭಟದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ (Holidays For Schools And Colleges) ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!
Advertisement
ರಾಜ್ಯಾದ್ಯಂತ ಯಾವ್ಯಾವ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ?
Advertisement
ಮೈಸೂರು:
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಾದ್ಯಂತ ಸೋಮವಾರ ಭಾರೀ ಮಳೆಯಾಗಿದ್ದು, ಜಿಲ್ಲಾಡಳಿತ ಸೂಚನೆ ಮೇರೆಗೆ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೇ ಮಾಡಲಾಗಿದೆ.
Advertisement
ದಕ್ಷಿಣ ಕನ್ನಡ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜುಲೈ 16ರಂದು ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಜೈಲಿನಲ್ಲಿರೋ ಇಮ್ರಾನ್ ಖಾನ್‌ಗೆ ಮತ್ತೆ ಶಾಕ್ – ದೇಶ ವಿರೋಧಿ ಚಟುವಟಿಕೆ ಆರೋಪದಡಿ ಪಿಟಿಐ ನಿಷೇಧ!
Advertisement
ಉಡುಪಿ:
ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲ್ಟ್ ಘೋಷಿಸಿದ್ದು, ಜು.16ರಂದು ಎಲ್ಲಾ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ಐಟಿಐ, ಡಿಪ್ಲೋಮೋ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಕೊಡಗು:
ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ (ಜು.16) ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ಶಾಲೆ, ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಕಟಾಕಟ್ ಅಂತ ದಲಿತರ ಹಣ ಲೂಟಿಯಾಗಿದೆ, ಇದು ಕರ್ನಾಟಕ ಇತಿಹಾಸಕ್ಕೆ ಕಪ್ಪು ಚುಕ್ಕೆ: ಗುಡುಗಿದ ಅಶೋಕ್
ಉತ್ತರ ಕನ್ನಡ:
ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ. ಹಳಿಯಾಳ ಮತ್ತು ಮುಂಡಗೊಂಡ ತಾಲೂಕಿನಲ್ಲಿ ಶಾಲಾ-ಕಾಲೇಜುಗಳು ಎಂದಿನಂತೆ ಮುಂದುವರಿಯಲಿವೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.
ಹಾಸನ:
ಇನ್ನೂ ಮಳೆ ಹಿನ್ನೆಲೆ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಅರಕಲಗೂಡು ಹಾಗೂ ಬೇಲೂರು ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಡಿಪಿಯು ಮಹಾಲಿಂಗಯ್ಯ ಆದೇಶಿಸಿದ್ದಾರೆ. ಉಳಿದ ಕಡೆ ಎಂದಿನಂತೆ ಶಾಲಾ ಕಾಲೇಜುಗಳು ಮುಂದುವರಿಯಲಿದೆ.