ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಬೆಂಗಳೂರು (Bengaluru) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ದಿನಗಳಿಂದ ಉರಿ ಬಿಸಿಲಲ್ಲಿ ಬೆಂದಿದ್ದ ನಗರಕ್ಕೆ ಭಾನುವಾರ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರಿನಲ್ಲಿ ಭಾನುವಾರ 2 ಸೆಂ.ಮೀ ಮಳೆ ದಾಖಲಾಗಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಮಳೆಯ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ರಾಯಚೂರು, ದಾವಣಗೆರೆ, ಚಾಮರಾಜನಗರ, ರಾಮನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ತುಮಕೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಭಾರೀ ಇಳಿಕೆ
Advertisement
Advertisement
ಉತ್ತರ ಒಳನಾಡಿಗೆ ಇಂದಿನಿಂದ ಎರಡು ದಿನಗಳ ಮಳೆಯ ಅಲರ್ಟ್ ನೀಡಲಾಗಿದ್ದು, ಬೀದರ್, ಕಲಬುರುಗಿ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಅಲ್ಲದೇ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಹಳೇ ಮೈಸೂರು ಕ್ಷೇತ್ರಗಳನ್ನು ಕಬ್ಜ ಮಾಡಲು ಮೋದಿ ಪಣ – 25+ ಸ್ಥಾನ ಗೆಲ್ಲಲು ರಣತಂತ್ರ
Advertisement