ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿಯ ನಡುವೆ ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather Report) ವರದಿ ಮಾಡಿದೆ.
ಬೆಂಗಳೂರು (Bengaluru) ಸೇರಿದಂತೆ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮೈ ಕೊರೆವ ಚಳಿಯ ನಡುವೆ ಇಂದು (ನ.24) ಮತ್ತು ನಾಳೆ (ನ.25) ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ತಿಳಿಸಿದೆ. ಇದನ್ನೂ ಓದಿ: ನೇಪಾಳದಲ್ಲಿ 5.3 ತೀವ್ರತೆಯ ಭೂಕಂಪ – ಬಂಗಾಳ, ಬಿಹಾರದಲ್ಲೂ ಭೂಮಿ ಕಂಪನ; ಬೆಚ್ಚಿಬಿದ್ದ ಜನ
ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
