ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ(Madikeri) ಹಾಗೂ ಅದರ ಸುತ್ತಮುತ್ತಲಿನ ಹಲವು ಪ್ರಮುಖ ಪ್ರದೇಶಗಳಲ್ಲಿ ಇಂದು ವರುಣನ ಪ್ರತ್ಯಕ್ಷನಾಗಿದ್ದು, ಕಳೆದ ಒಂದು ಗಂಟೆಯಿಂದ ಜಿಟಿಜಿಟಿ ಮಳೆ(Rain) ಸುರಿಯುತ್ತಿದೆ.
ಮಡಿಕೇರಿ ನಗರ ಸೇರಿದಂತೆ ಗಾಳಿಬೀಡು, ಸುಂಟಿಕೊಪ್ಪ, ಮದೆನಾಡು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ವರದಿಯಾಗಿದೆ.
ಜೂನ್ ತಿಂಗಳ ಆರಂಭದ ದಿನಗಳಿಂದಲೂ ಕೊಡಗಿನಲ್ಲಿ ಮುಂಗಾರು ಮಳೆ ತೀವ್ರವಾಗಿ ದುರ್ಬಲಗೊಂಡಿತ್ತು. ಕಾಫಿ ನಾಡಿನಲ್ಲಿ ಸಕಾಲಕ್ಕೆ ಮಳೆಯಾಗದೆ, ಕೃಷಿ ಚಟುವಟಿಕೆಗಳು ಕುಂಠಿತಗೊಂಡು ರೈತಾಪಿ ವರ್ಗದ ಜನರಲ್ಲಿ ಆತಂಕ ಮೂಡಿಸಿತ್ತು. ಆದರೆ, ಇಂದು ದಿಢೀರನೆ ಆರಂಭವಾಗಿರುವ ಈ ಮಳೆಯು ರೈತರ ಕಂಗಾಲಾಗಿದ್ದ ಮುಖದಲ್ಲಿ ಮಂದಹಾಸ ಮೂಡಿಸುವಂತೆ ಮಾಡಿದೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮತ್ತೆ ಜೀವ ಬಂದಂತಾಗಿದೆ. ಇದನ್ನೂ ಓದಿ: ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ: 2-3 ದಿನದಲ್ಲಿ ಮಾರ್ಗಸೂಚಿ ಪ್ರಕಟ, ಯಾರಿಗೆ ಸಿಗುತ್ತೆ? ಯಾರಿಗೆ ಸಿಗಲ್ಲ?
