ಧಾರವಾಡ: ಕಳೆದ ಐದು ದಿನಗಳಿಂದ ಧಾರವಾಡ(Dharwad) ಜಿಲ್ಲೆಯಲ್ಲಿ ಮೋಡ ಕವಿದಿದ್ದರೂ ಮಳೆ(Rain Effect) ಸುರಿದಿರಲಿಲ್ಲ. ಆದರೆ ಭಾನುವಾರ ಮಧ್ಯಾಹ್ನ ಹಾಗೂ ಸಂಜೆ ಸುರಿದ ಸಾಧಾರಣ ಮಳೆ ಸ್ವಲ್ಪ ಮಟ್ಟಿನ ನೆಮ್ಮದಿ ತಂದಿದೆ
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡರೂ, ರೈತರ ಮುಖದಲ್ಲಿ ಮಂದಹಾಸ ಮೂಡಿಸಿತು.
ಈಗಾಗಲೇ ಹೊಲಗಳಲ್ಲಿ ಬಿತ್ತನೆ ಮಾಡಿರುವ ರೈತರು ಮಳೆಗಾಗಿ ಕಾಯುತ್ತಿದ್ದರು. ಮಳೆ ಬರದಿದ್ದರೆ ಬಿತ್ತಿದ ಬೀಜ ಮೊಳಕೆ ಒಡೆಯುವುದಿಲ್ಲ ಎಂಬ ಆತಂಕದಲ್ಲಿದ್ದರು. ಆದರೆ ಇಂದಿನ ಮಳೆ ಅವರಿಗೆ ಸ್ವಲ್ಪ ನೆಮ್ಮದಿ ನೀಡಿದೆ.ಇದನ್ನೂ ಓದಿ: ಕಿಂಚಿತ್ ಅಮಲು ಬೆರೆಸಿದರೂ ಗುಟ್ಕಾ, ಪಾನ್ ಮಸಾಲಾ ಕಂಪ್ಲೀಟ್ ಬ್ಯಾನ್: ಡಿಕೆಶಿ ಎಚ್ಚರಿಕೆ
ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ 2 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಇನ್ನು ಮುಂದೆಯೂ ಸಮಯಕ್ಕೆ ಸರಿಯಾಗಿ ಮಳೆ ಬಂದರೆ ಮಾತ್ರ ಉತ್ತಮ ಫಸಲು ಕೈ ಸೇರುವ ನಿರೀಕ್ಷೆಯಿದೆ. ಸದ್ಯ ಸುರಿದ ಮಳೆಯಿಂದ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.ಇದನ್ನೂ ಓದಿ: Raichur | ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದು ಇಬ್ಬರು ಸಾವು – ಓರ್ವನ ಸ್ಥಿತಿ ಗಂಭೀರ
