ರಾಜ್ಯದಲ್ಲಿ ವರುಣನ ಅಬ್ಬರಕ್ಕೆ ನಾನಾ ಅವಾಂತರ – ಎಲ್ಲೆಲ್ಲಿ ಏನಾಗಿದೆ?

Public TV
2 Min Read
Rain Effect

ಬೆಂಗಳೂರು: ಕಳೆದ 2-3 ದಿನಗಳಿಂದ ರಾಜ್ಯದಲ್ಲಿ ವರುಣನ (Rain) ಅಬ್ಬರ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಾನಾ ಅವಾಂತರಗಳು ಸೃಷ್ಟಿಯಾಗಿವೆ.

ಬರದನಾಡು ಚಿತ್ರದುರ್ಗ (Chitradurga) ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗಿದೆ. ಬಿಸಿಲ ಬೇಗೆಯಿಂದ ಬಸವಳಿದ ಕೋಟೆನಾಡಲ್ಲಿ ಧರೆ ತಂಪಾಯಿತು ಎಂಬ ಖುಷಿ ಒಂದೆಡೆಯಾದರೆ, ಬಿರುಗಾಳಿ ಸಹಿತ ಅಕಾಲಿಕವಾಗಿ ಸುರಿದ ಮಳೆ ಮುದ್ದಾಪುರ ಗ್ರಾಮದಲ್ಲಿ ಬಾರಿ ಅವಾಂತರ ಸೃಷ್ಟಿಸಿದೆ. ಇದನ್ನೂ ಓದಿ: ಎಡಿಜಿಪಿ ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರ

Rain Effect Chitradurga

ಮುದ್ದಾಪುರ ಗ್ರಾಮದ ರೈತ ಅವಿನಾಶ್ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ (Sunflower) ಹೂವು ಬೆಳೆದಿದ್ದರು. ಇನ್ನೂ 4-5 ದಿನಗಳಲ್ಲಿ ಅದನ್ನು ಕಟಾವು ಮಾಡಬೇಕೆಂಬ ಸಿದ್ಧತೆಯಲ್ಲಿದ್ದರು. ಆದರೆ ಗಾಳಿಮಳೆಯ ರಭಸಕ್ಕೆ ಕೈಗೆ ಬಂದಿದ್ದ ಸೇವಂತಿಗೆ ಹೂವು ಸಂಪೂರ್ಣ ನೆಲಕ್ಕೆ ಕುಸಿದಿದೆ. ಅಲ್ಲದೇ ಜಮೀನಿನಲ್ಲೇ ನೀರು ಹರಿದು ಮಣ್ಣು ಸಮೇತ ಕೊಚ್ಚಿ ಹೋಗಿದ್ದು, ಸೇವಂತಿಗೆ ಹೂವಿನ ಗಿಡಗಳು ಸರ್ವನಾಶವಾಗಿವೆ. ಇದನ್ನೂ ಓದಿ: ಪರಂಗೆ ಇಡಿ ಈಟಿ – 140 ಕೋಟಿ ವ್ಯವಹಾರ ನಡೆದ್ರೂ 95 ಕೋಟಿಗೆ ಖರೀದಿ?

Rain Effect Uttara Kannada

ಅರಬ್ಬೀ ಸಮುದ್ರದಲ್ಲಿ (Arabian Sea) ವಾಯುಭಾರ ಕುಸಿತ ಹಿನ್ನಲೆಯಲ್ಲಿ ಮಂಗಳೂರಿನ (Mangaluru) ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಸಮುದ್ರ ಪ್ರಕ್ಷುಬ್ದವಾಗಿದೆ. ಬೃಹತ್ ಗಾತ್ರದ ಅಲೆಗಳು ಕಡಲ ತೀರಕ್ಕೆ ಬಂದು ಅಪ್ಪಳಿಸುತ್ತಿದೆ. ಸಮುದ್ರ ತೀರದುದ್ದಕ್ಕೂ ಗಾಳಿಯ ವೇಗ ಹೆಚ್ಚಾಗಿದ್ದು, ಕಡಲ ತೀರದ ನಿವಾಸಿಗಳು ಮುಂಗಾರು ಪೂರ್ವದಲ್ಲೇ ಕಡಲ್ಕೊರೆತದ ಭೀತಿಯಲ್ಲಿದ್ದಾರೆ. ಕಡಲ ತೀರಕ್ಕೆ ಜನ ತೆರಳದಂತೆ ಹಾಗೂ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಜೈಶಂಕರ್‌ ಕರೆ ಬೆನ್ನಲ್ಲೇ ತಾಲಿಬಾನ್‌ ವಿದೇಶಾಂಗ ಸಚಿವರನ್ನೇ ಬೀಜಿಂಗ್‌ಗೆ ಕರೆಸಿ ಪಾಕ್‌ ಜೊತೆ ಕೈ ಕುಲುಕಿಸಿದ ಚೀನಾ!

Rain Effect Davanagere

ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಕುಮಟಾ ತಾಲೂಕಿನ ಖೈರೆ ಕ್ರಾಸ್ ಬಳಿ ಅಂಕೋಲಾ-ಶಿರಸಿಗೆ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ. ಇನ್ನೂ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿಯುವ ಭೀತಿ ಇದ್ದು, ಗುಡ್ಡದ ಅಕ್ಕಪಕ್ಕದ ನಿವಾಸಿಗಳನ್ನು ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಸದ್ಯ ಮಿರ್ಜಾನ ಕತಗಾಲ್ ರಸ್ತೆಯನ್ನು ಅಧಿಕಾರಿಗಳು ಬಂದ್ ಮಾಡಿದ್ದು, ಸುಮಾರು 18 ಕಿ.ಮೀ ಸುತ್ತುಹಾಕಿ ಕುಮಟಾ ಮೂಲಕ ಶಿರಸಿಗೆ ಹೊಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಮೇ 22ಕ್ಕೆ ಬಿಕನೇರ್ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

ದಾವಣಗೆರೆ (Davanagere) ನಗರ ಮತ್ತು ಜಿಲ್ಲಾದ್ಯಂತ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಗೆ ಹರಿಹರ ತಾಲೂಕಿನ ಹೊಳೆಸಿರಿಗೆರೆ ಗ್ರಾಮಕ್ಕೆ ನೀರು ನುಗ್ಗಿದೆ. ಗ್ರಾಮದ ರಸ್ತೆಗಳು ಕೆರೆಯಂತಾಗಿದ್ದು, ಜನರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ಹಳ್ಳ ತುಂಬಿ ತೋಟಗಳಿಗೆ ನೀರು ನುಗ್ಗಿದೆ. ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಇದನ್ನೂ ಓದಿ: ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಹಾನಿ – ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಮರ್ಜೆನ್ಸಿ

Share This Article