ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಆಶ್ಲೇಷ ಮಳೆ ಅಬ್ಬರಿಸುತ್ತಿದ್ದು, ಹಲವೆಡೆ ಪ್ರವಾಹದ ಸ್ಥಿತಿ ಎದುರಾಗಿದೆ.
ಜಿಲ್ಲೆಯ ವೀರಾಜಪೇಟೆ ತಾಲೂಕಿನ ಶ್ರೀಮಂಗಲ ಪಂಚಾಯತಿ ವ್ಯಾಪ್ತಿಯ ನಿವಾಸಿ ಚಂಗಪ್ಪನವರ ಶೆಡ್ ಕುಸಿದಿದ್ದು, ಪರಿಣಾಮ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರು, ಜೀಪು, ಬೈಕ್ ಮತ್ತು ಟ್ರೇಲರ್ ಸಂಪೂರ್ಣ ಜಖಂಗೊಂಡಿದೆ. ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಸಮೀಪದ ಬರೆಯಲ್ಲಿ ನೀರಿನ ಜಲ ಹರಿಲಾರಂಭಿಸಿದ ಪರಿಣಾಮ ಬರೆ ಕುಸಿತಗೊಂಡಿದೆ.
Advertisement
Advertisement
ಬರೆ ಕುಸಿದು ಕಾಂಪೌಂಡ್ ಮೇಲೆ ಬಿದ್ದದೆ. ನಂತರ ಕುಸಿತದ ರಭಸಕ್ಕೆ ಕಾಂಪೌಂಡ್ ಶೆಡ್ ನ ಮೇಲೆ ಉರುಳಿದೆ. ಆದ್ದರಿಂದ ಶೆಡ್ ನಲ್ಲಿ ನಿಲ್ಲಿಸಿದ್ದ ವಾಹನಗಳು ತೀವ್ರ ಜಖಂಗೊಂಡಿದೆ. ಸದ್ಯಕ್ಕೆ ಈ ಅವಘಡದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Advertisement
ಸ್ಥಳಕ್ಕೆ ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ತೆರಳಿ ರೆವಿನ್ಯೂ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸುಮಾರು 7 ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿವೆ ಎಂದು ಅಂದಾಜಿಸಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv