ಬೀದರ್ : ಬಿರುಗಾಳಿ ಸಹಿತ ಧಾರಾಕಾರ ಮಳೆಯ (Rain) ವೇಳೆ ಗಾಳಿಗೆ ತಗಡುಗಳು ಹಾರಿ ಮಗುವೊಂದು ಗಂಭೀರವಾಗಿ ಗಾಯಗೊಂಡ ಘಟನೆ ಬೀದರ್‌ನ (Bidar) ಬುಧೇರಾ ಗ್ರಾಮದಲ್ಲಿ ನಡೆದಿದೆ.
ಸತತ 30 ನಿಮಿಷಗಳ ಕಾಲ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಕಬ್ಬಿಣದ ತಗಡು ಹಾರಿ ಬಂದು ಮಗುವಿಗೆ ಬಡೆದಿದೆ. ಧನರಾಜ್ ಎಂಬುವರ ಮಗುವಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಮನೆಯ ತಗಡಿನ ಶೆಡ್ಡಿಗೆ ಮಗುವಿಗಾಗಿ ಜೋಕಾಲಿ ಕಟ್ಟಿದ್ದರು. ಮಗು ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಬಾರಿ ಬಿರುಗಾಳಿಗೆ ಕಬ್ಬಿಣದ ತಗಡುಗಳು ಹಾರಿ ಬಿದ್ದಿದ್ದು, ಈ ಅವಘಡಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ಜನರ ಗುಂಪು – 8ರ ಬಾಲಕ, ತಾಯಿ ದುರ್ಮರಣ
Advertisement
Advertisement
ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಕೂಡಲೇ ಅಂಬುಲೆನ್ಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಪರಿಹಾರದ ಹಣಕ್ಕಾಗಿ ಮೃತ ವ್ಯಕ್ತಿಯನ್ನು ಪತಿ ಎಂದ ಮಹಿಳೆ
Advertisement