ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಭವಿಸಿದ ಭಾರೀ ಮಳೆಯಿಂದಾಗಿ ನಮ್ಮ ಮೆಟ್ರೋ ನೇರಳೆ ಮಾರ್ಗದ (Metro Purple Line) ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಟ್ರಿನಿಟಿ ನಿಲ್ದಾಣದಿಂದ ಮಹಾತ್ಮ ಗಾಂಧಿ ರಸ್ತೆ (MG Road) ಕಡೆಗೆ ಹೊರಡುವ ಮಾರ್ಗದಲ್ಲಿ ಮೆಟ್ರೋ ಹಳಿಗಳ ಮೇಲೆ ಮರದ ಕೊಂಬೆ ಬಿದ್ದಿರುವ ಕಾರಣ, ಮೆಟ್ರೋ ರೈಲು (Metro Train) ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
Due to a tree branch falling on the metro tracks just after Trinity Station towards MG road . Trains are operating only between Indranagar to Whitefield and MG road to Challaghatta , from 7.26 PM . Efforts are on to clear the branch and resume normal operations FKI
— ನಮ್ಮ ಮೆಟ್ರೋ (@OfficialBMRCL) June 2, 2024
Advertisement
ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ (Namma Metro), ರಾತ್ರಿ 7.26 ಗಂಟೆಯಿಂದ ಇಂದ್ರಾನಗರದಿಂದ ವೈಟ್‌ಫೀಲ್ಡ್ ಮತ್ತು ಎಂ.ಜಿ ರಸ್ತೆಯಿಂದ ಚಲ್ಲಘಟ್ಟದ ನಡುವೆ ಮಾತ್ರ ರೈಲುಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ.
Advertisement
ಬೆಂಗಳೂರಿನಲ್ಲಿಂದು ಸುರಿದ ಭಾರೀ ಮಳೆಯಿಂದಾಗಿ (Bengaluru Rains) ಅವಾಂತರ ಸಂಭವಿಸಿದ್ದು, ಹಳಿಗಳ ಮೇಲೆ ಬಿದ್ದಿರುವ ಮರದ ರೆಂಬೆ, ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಶೀಘ್ರದಲ್ಲೇ ಸಂಚಾರ ಪುನರಾರಂಭಿಸಲಾಗುತ್ತದೆ ಎಂದು ಎಕ್ಸ್ ಖಾತೆಯಲ್ಲಿ ತಿಳಿಸಿದೆ.