ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಆರಂಭವಾಗಲಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಭಾಗದಲ್ಲಿ ಅಧಿಕ ಮಳೆಯಾಗಲಿದ್ದು, ಮಲೆನಾಡು ಹಾಗೂ ಕರಾವಳಿಯಲ್ಲಿ ಕೂಡ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕರಾದ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
Advertisement
Advertisement
ಬೆಂಗಳೂರಿನಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಗಾಳಿಯ ಒತ್ತಡ ಕಡಿಮೆ ಇದ್ದು ಮೋಡಗಳಲ್ಲಿ ಬದಲಾವಣೆಯಾಗಿ ಮಳೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.
Advertisement
ಬೆಳಗ್ಗೆಯಿಂದ ಬಿಸಿಲಿನ ಪ್ರಮಾಣ ಹೆಚ್ಚಿದ್ದರೂ ರಾತ್ರಿ ವೇಳೆಗೆ ಬೆಂಗಳೂರು ನಗರದ ಹಲವೆಡೆ ತುಂತುರು ಮಳೆಯಾಗಿದೆ. ಮೆಜೆಸ್ಟಿಕ್, ಕಾರ್ಪೋರೇಷನ್, ಟೌನ್ ಹಾಲ್, ಕೆ.ಜಿ ರೋಡ್, ಬಾಪೂಜಿ ನಗರ ಸೇರಿದಂತೆ ಹಲವೆಡೆ ತುಂತುರು ಮಳೆ ಸುರಿದಿದೆ. ತುಂತುರು ಮಳೆಯಲ್ಲಿಯೇ ಸವಾರರು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದ ದೃಶ್ಯಗಳು ಕಂಡು ಬಂತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv