ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ (Hospet) ನಡೆಯುತ್ತಿರುವ ಸಾಧನಾ ಸಮಾವೇಶಕ್ಕೆ (Sadhana Samavesha) ಮಳೆಯ ಭೀತಿ ಎದುರಾಗಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಹೊಸಪೇಟೆಯಲ್ಲಿ ಮೋಡ ಕವಿದ ವಾತಾವರಣ ಇದ್ದು ಮಳೆ (Rain) ಬರುವ ಸಾಧ್ಯತೆ ಹೆಚ್ಚಾಗಿದೆ. ಇದನ್ನೂ ಓದಿ: Belagavi | 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಅಪ್ರಾಪ್ತ ಸೇರಿ ಇಬ್ಬರ ಬಂಧನ
ಈಗಾಗಲೇ ಮೋಡ ಕವಿದಿದ್ದು, ಗುಡುಗು ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ಮಳೆ ಬರುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ವಿಜಯನಗರ ಜಿಲ್ಲೆಗೆ ಯಲ್ಲೋ ಅಲರ್ಟ್ ಜಾರಿ ಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್ – ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ ಕಳ್ಳ ಅರೆಸ್ಟ್
ಜ್ಯದ ವಿವಿಧೆಡೆಯಿಂದ ಕಾರ್ಯಕ್ರಮಕ್ಕೆ ಜನರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ 1 ಲಕ್ಷ ಚಯರ್, ಬೃಹತ್ ಜರ್ಮನ್ ಟೆಂಟ್ ಹಾಕಲಾಗಿದೆ. ಹೀಗಾಗಿ ಮಳೆ ಬಂದರೂ ಕಾರ್ಯಕ್ರಮಕ್ಕೆ ತೊಂದರೆ ಇಲ್ಲ. ಆದರೆ ಊಟದ ವ್ಯವಸ್ಥೆ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.