ಬೆಂಗಳೂರು: ಉತ್ತರ ಕನ್ನಡದಲ್ಲಿ (UttaraKannada) ವರುಣಾರ್ಭಟಕ್ಕೆ ಜನರು ನಲುಗಿ ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾರವಾರ (Karwar) ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ರಸ್ತೆ ಜಲಾವೃತವಾಗಿದೆ. ನಿರೀಕ್ಷೆಗೂ ಮೀರಿ ಮಳೆ (Heavy Rain) ಬಂದಿದ್ರಿಂದ ಸಂಕಷ್ಟದಲ್ಲಿದ್ದ 5 ಮನೆಯಲ್ಲಿನ ಜನರನ್ನು ಗ್ರಾಮಸ್ಥರು ಬೋಟ್ ಮೂಲಕ ರಕ್ಷಿಸಲಾಗಿದೆ.
ಇಡೂರು ಗ್ರಾಮದಲ್ಲಿ 10ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ನೂರಾರು ಹೆಕ್ಟೇರ್ ಕೃಷಿ ಭೂಮಿ ನೀರಲ್ಲಿ ಮುಳುಗಿ ಹೋಗಿದೆ. ಜಿಲ್ಲಾಡಳಿತದ ರಕ್ಷಣಾ ತಂಡ ಬಾರದ ಹಿನ್ನೆಲೆಯಲ್ಲಿ ಮಕ್ಕಳು, ಮಹಿಳೆಯರನ್ನ ಬೋಟ್ ಮೂಲಕ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕದಂಬ ನೌಕಾನೆಲೆಯ ಪಕ್ಕದಲ್ಲಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ವರೆಗೂ ಹೋಗೋಣ – ರಾಜ್ಯ ಸರ್ಕಾರಕ್ಕೆ ಆರ್. ಅಶೋಕ್ ಬೆಂಬಲ!
ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಮನೆ, ರಸ್ತೆಗಳು ಜಲಾವೃತವಾಗಿದೆ. ಕುಮಟಾ ತಾಲೂಕಿನ ಗೋಕರ್ಣದ ತಾರಮಕ್ಕಿ ಸರ್ಕಾರಿ ಶಾಲೆ ಬಳಿ ಗುಡ್ಡ ಕುಸಿತಗೊಂಡಿದೆ. ರಸ್ತೆಯಲ್ಲಿ ಮಣ್ಣು ಕುಸಿದ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸ್ಥಳೀಯ ಆಡಳಿತದಿಂದ ಮಣ್ಣು ತೆರವು ಕಾರ್ಯ ಮುಂದುವರಿದಿದೆ. ಅಂಕೋಲ ತಾಲೂಕಿನ ಗುಳಿಹಳ್ಳ ತುಂಬಿ ಹೊಸದೇವನ ಫಾಲ್ಸ್‌ಗೆ ಜೀವಕಳೆ ಬಂದಿದ್ದು ಪ್ರವಾಸಿಗರನ್ನು ಸೆಳೆಯುತ್ತಿದೆ. ಈ ಮಧ್ಯೆ, ರಾಜ್ಯದಲ್ಲಿ ಮತ್ತೆ 7 ದಿನ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಅನುಮಾನಸ್ಪದ ಸಾವು – ಪೋಷಕರಿಂದ ಕೊಲೆ ಆರೋಪ!
ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ:
ಪಶ್ಚಿಮ ಘಟ್ಟಗಳಲ್ಲೂ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಜೀವ ನದಿಗಳು ತುಂಬಿ ಹರಿಯುತ್ತಿದೆ. ಬಂಟ್ವಾಳದ ಪಾಣೆ ಮಂಗಳೂರು ಬಳಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಸದ್ಯ ನದಿಯ ನೀರಿನ ಮಟ್ಟ 6.1 ಮೀಟರ್ ಏರಿಕೆಯಾಗಿದೆ. ಇದು ಈ ವರ್ಷದ ಗರಿಷ್ಠ ಪ್ರಮಾಣವಾಗಿದೆ. ಇದನ್ನೂ ಓದಿ: ಮುಸ್ಲಿಂ ಮಹಿಳೆ ವಿಚ್ಚೇದನ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ತೀರ್ಪು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದ ಮುಸ್ಲಿಂ ಬೋರ್ಡ್
ನೀರಿನ ಮಟ್ಟ 7.5 ಮೀಟರ್ ಏರಿದರೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಇದೆ. ನೇತ್ರಾವತಿ ನದಿಯ ಅಪಾಯದ ಮಟ್ಟ 8 ಮೀಟರ್ ಆಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದ ಶಾಲೆಯ ಹಂಚುಗಳು ಹಾರಿ ಹೋಗಿವೆ. ಕೊಡಗು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸ್ತಿದ್ದಾನೆ. ಭಾರಿ ಗಾಳಿ ಸಹಿತ ಮಳೆಗೆ ಮಡಿಕೇರಿ ನಗರದ ಎಫ್‌ಎಂಸಿ ಕಾಲೇಜು ಹಿಂಭಾಗದಲ್ಲಿ ಹಲವು ವಿದ್ಯುತ್ ಕಂಬಗಳು ಧರೆಗುರುಳಿದೆ.
ಮಡಿಕೇರಿ – ಗಾಳೀಬೀಡು ನಡುವಿನ ರಸ್ತೆ ಸಂಪರ್ಕ ಕಟ್ ಆಗಿದೆ. ಶಿವಮೊಗ್ಗದ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತಗೊಂಡಿದೆ. ಹೀಗಾಗಿ ಭಾರೀ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ನಿಷೇಧ ಮಾಡಿದೆ. ಸಾಗರದ-ಸಿಗಂದೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಬಿದ್ದಿದ್ದು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ