– ಕೆಲವೆಡೆ ಗುಡುಗು, ಸಿಡಿಲಬ್ಬರದ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಬಿಸಿಲಬ್ಬರ ಹೆಚ್ಚುತ್ತಿರುವ ಹೊತ್ತಲ್ಲಿ ಹಲವೆಡೆ ಮಳೆರಾಯ ತಂಪೆರೆಯುತ್ತಿದ್ದಾನೆ. ಕೆಲವೆಡೆ ವರುಣ ಅಬ್ಬರಿಸಿ ಬೊಬ್ಬರಿಯುತ್ತಿದ್ದರೇ ಇನ್ನೂ ಹಲವೆಡೆ ಸಾಧಾರಣ ಮಳೆಯಾಗುತ್ತಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಮುಂದಿನ ಒಂದು ವಾರ ಗುಡುಗು ಸಹಿತ ಹಾಗೂ ಸಾಧಾರಣ ಮಳೆಯಾಗುವ (Rain) ಮುನ್ನೆಚ್ಚರಿಕೆ ನೀಡಿದೆ.
ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಏಳು ದಿನಗಳ ಕಾಲ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಮಾನ ಕೇಂದ್ರ/ರಾಜ್ಯ ಪವನಶಾಸ್ತ್ರ ಕೇಂದ್ರ ನೀಡಿದೆ. ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ, ಸಿಡಿಲು-ಗುಡುಗು ಸಹಿತ ಭಾರೀ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದು, ಈ ಆರ್ಭಟ ಮುಂದಿನ ಒಂದು ವಾರವೂ ಮುಂದುವರೆಯಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ನಿವೃತ್ತ ಡಿಜಿಪಿ ಬರ್ಬರ ಹತ್ಯೆ – ತಂಗಿಯರಿಗೆ ಆಸ್ತಿ ಕೊಟ್ಟಿದ್ದಕ್ಕೆ ನಡೀತಾ ಕೊಲೆ?
ಏ.21ರಿಂದ ಏ.27ರವರೆಗೆ ಮಳೆ ಬರುವ ಮುನ್ಸೂಚನೆ ನೀಡಲಾಗಿದೆ. ಸೋಮವಾರ, ಮಂಗಳವಾರ ಹಾಗೂ ಬುಧವಾರ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ಒಂದೆರಡು ಸ್ಥಳಗಳಲ್ಲಿ ಬಲವಾದ ಮೇಲ್ಮೈ ಸುಳಿಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏ.24 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ. ಇದನ್ನೂ ಓದಿ: ಕೋಟಿ ಕೋಟಿ ಮೌಲ್ಯದ ಆಸ್ತಿ ಹೊಂದಿದ್ದ ಮಂಗಳಮುಖಿಯ ಬರ್ಬರ ಹತ್ಯೆ – ಪತಿ, ಮನೆಗೆಲಸದಾಕೆ ಪರಾರಿ
ಏ.25 ರಂದು ಉಡುಪಿ, ದಕ್ಷಿಣ ಕನ್ನಡದ ಎರಡು ಸ್ಥಳಗಳಲ್ಲಿ, ಉತ್ತರ ಕರ್ನಾಟಕದ ಒಳನಾಡಿನ ಎರಡು ಸ್ಥಳಗಳಲ್ಲಿ, ದಕ್ಷಿಣ ಕನ್ನಡದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಏ.26ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಎರಡು ಸ್ಥಳಗಳಲ್ಲಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ನಿವೃತ್ತ IPS ಅಧಿಕಾರಿಗೆ 10 ಬಾರಿ ಚಾಕುವಿನಿಂದ ಇರಿದು ಕೊಂದ ಪತ್ನಿ; 15 ನಿಮಿಷ ನರಳಿ ಪ್ರಾಣಬಿಟ್ಟ ಓಂ ಪ್ರಕಾಶ್