-ಮೇ 9ರ ಬಳಿಕ ರಾಜ್ಯದಲ್ಲಿ ಮಳೆ ಹೆಚ್ಚಳ ಸಾಧ್ಯತೆ
ಬೆಂಗಳೂರು: ಸಿಲಿಕಾನ್ ಸಿಟಿ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಬೆಂಗಳೂರಿನಲ್ಲಿ (Bengaluru) ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.ಇದನ್ನೂ ಓದಿ:ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್
ಬೆಂಗಳೂರು ಸೇರಿದಂತೆ ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನೂ ಮೇ 9ರ ಬಳಿಕ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.ಇದನ್ನೂ ಓದಿ: ಭಾರತದ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಪಾಕಿಗೆ ಮತ್ತೆ ವಿಶ್ವಸಂಸ್ಥೆಯಲ್ಲಿ ಮುಖಭಂಗ