ಬೆಂಗಳೂರು: ನಾಳೆಯಿಂದ 3 ದಿನಗಳ ಕಾಲ ರಾಜ್ಯದ (Karnataka) ಹಲವೆಡೆ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: 2011ರಲ್ಲಿ ಧೋನಿ, 2025ರಲ್ಲಿ ಕೌರ್ – ಏಕದಿನ ವಿಶ್ವಕಪ್ ಗೆದ್ದ ಭಾರತದ 3ನೇ ಕ್ಯಾಪ್ಟನ್
ನವೆಂಬರ್ 5, 6ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಈ ಕ್ಷಣಕ್ಕಾಗಿ 45 ದಿನಗಳಿಂದ ಸರಿಯಾಗಿ ನಿದ್ರೆ ಮಾಡಿರಲಿಲ್ಲ – ವಿಶ್ವಕಪ್ ಗೆದ್ದ ನಂತ್ರ ಮಂಧಾನಾ ಭಾವುಕ

