ತುಮಕೂರು: ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ಭಾರೀ ಮಳೆಯಾಗುವ (Rain) ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ತುಮಕೂರು (Tumakuru) ಡಿಸಿ ಶುಭಕಲ್ಯಾಣ್ ಎಚ್ಚರಿಕೆ ನೀಡಿದ್ದಾರೆ. ಮಳೆ ಹಾನಿಯಾದರೇ ತ್ವರಿತವಾಗಿ ಸ್ಪಂದಿಸಲು ಕಂದಾಯ ಅಧಿಕಾರಿಗಳು ಸಜ್ಜಾಗಿದ್ದು, ಜಿಲ್ಲೆಯಾದ್ಯಂತ ಮಳೆ ಹಾನಿಯಾದರೆ 24 ಗಂಟೆಯಲ್ಲಿ ಪರಿಶೀಲನೆ ಮಾಡಿ ಪರಿಹಾರ ಕೊಡುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ದಾವಣಗೆರೆ | ಬ್ಲಡ್ ಕ್ಯಾನ್ಸರ್‌ನೊಂದಿಗೆ ಹೋರಾಡಿ ಎಸ್ಎಸ್ಎಲ್‌ಸಿಯಲ್ಲಿ ಶಾಲೆಗೆ ಫಸ್ಟ್ ಬಂದ ವಿದ್ಯಾರ್ಥಿನಿ
ಈಗಾಗಲೇ ಜಿಲ್ಲೆಯಲ್ಲಿ ಮಳೆಯಿಂದ ನಾಲ್ವರು ವ್ಯಕ್ತಿಗಳು ಹಾಗೂ ಎರಡು ಹಸುಗಳು ಕೊನೆಯುಸಿರೆಳೆದಿವೆ. ಮಳೆ ಸಮಯದಲ್ಲಿ ಮನೆಯಿಂದ ಹೊರಗೆ ಬರದಂತೆ ಜಿಲ್ಲೆಯ ಜನತೆಗೆ ಡಿಸಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ಮಳೆಯಿಂದ ಈಗಾಗಲೇ ಸಾಕಷ್ಟು ಪ್ರಮಾಣದ ಹಾನಿಯಾಗಿದೆ. 500ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ತೋಟಗಾರಿಕೆ ಮತ್ತು ವಿವಿಧ ಬೆಳೆಗಳಿಂದ 6 ಹೆಕ್ಟೇರ್ ಮಳೆಗೆ ನಾಶವಾಗಿದೆ ಎಂದು ಡಿಸಿ ಶುಭಕಲ್ಯಾಣ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೈಸೂರು| ಯುದ್ಧ ಸನ್ನಿವೇಶ ತಂದ ಕಣ್ಣೀರು – ಭಾರತದಲ್ಲಿ ಹೆಂಡತಿ, ಪಾಕ್‌ನಲ್ಲಿ ಗಂಡ