– 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಈ ತಿಂಗಳು ಮುಂಗಾರು ಬಿರುಸು ಪಡೆಯುವ ಸಾಧ್ಯತೆಯಿದ್ದು, 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ವಿದೇಶಿ ಮಹಿಳೆಯರ ಮೇಲೆ ಗ್ಯಾಂಗ್ ರೇಪ್ – ಪಾಕಿಸ್ತಾನ ಉಪಪ್ರಧಾನಿ ಸಂಬಂಧಿ ಅರೆಸ್ಟ್
ರಾಜ್ಯದ ಹಲವೆಡೆ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ನಗರದಾದ್ಯಂತ ತುಂತುರು ಮಳೆ ಜೊತೆಗೆ ತಂಪು ಗಾಳಿ ಬೀಸುತ್ತಿರುವ ಪರಿಣಾಮ ತಂಪಾದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಮಕ್ಕಳ ಮೇಲೆ ಹಲ್ಲೆ ಕೇಸ್ – ಬೇಬಿ ಕೇರ್ ನಡೆಸ್ತಿದ್ದ ಕಂಪನಿಯಿಂದ ಸ್ಪಷ್ಟನೆ
