ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವಡೆ ಇಂದಿನಿಂದ (ಮೇ 3) ಮೇ 9 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆ ಬೀಳಲಿದೆ. ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ ಬೆಳಗಾವಿ, ಬೀದರ್, ಧಾರವಾಡ, ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಎರಡು ದಿನ ಒಣ ಹವೆ ಇರಲಿದೆ. ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ
ಮೇ 5 ರಿಂದ ಕೊಪ್ಪಳ, ಯಾದಗಿರಿ, ರಾಯಚೂರು, ಕಲಬುರಗಿ, ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಜೀವರಾಜ್ ಜೊತೆ ಕೆಲಸ ಮಾಡ್ತಿದ್ದ ಅಧಿಕಾರಿಗಳನ್ನ ಬಳಸಿಕೊಂಡು ಅಕ್ರಮ: ಡಿಕೆಶಿ ಕೆಂಡಾಮಂಡಲ

