ಬೆಂಗಳೂರು: ರಾಜ್ಯದಲ್ಲಿ ಏ.8ರವರೆಗೆ ಪೂರ್ವ ಮುಂಗಾರು ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದ.ಕನ್ನಡ, ಉ.ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಝೆಲೆನ್ಸ್ಕಿ ತವರೂರು ಕ್ರಿವಿ ರಿಹ್ ಮೇಲೆ ರಷ್ಯಾ ದಾಳಿ – 18 ಮಂದಿ ಸಾವು
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ. ಕೆಲವೆಡೆ ಪ್ರತಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: Mandya | ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವು