– ಇಂದು, ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ (Rain Alert) ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ.
ಇಂದು ಮತ್ತೆ ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 30ವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 03ರವರೆಗೂ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 03ವರೆಗೂ ವ್ಯಾಪಕ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೂ ಹಗುರದಿಂದ, ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಅಧಿಕಾರಿ ಸಿಎಸ್ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು | 2 ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿ ಆತ್ಮಹತ್ಯೆ – ಪತಿ ಅರೆಸ್ಟ್