– ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ಇಂದೂ ಕೂಡ ಮಳೆ (Rain) ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಳೆ ಹಿನ್ನೆಲೆ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಇಂದು (ಮಂಗಳವಾರ) ಮತ್ತು ನಾಳೆ (ಬುಧವಾರ) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದು ಮತ್ತೆ ನಾಳೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: Apple iPhone 16 series launched – ಭಾರತದಲ್ಲಿ ಎಷ್ಟು ದರ? ಬೇರೆ ದೇಶಗಳಲ್ಲಿ ಎಷ್ಟು ದರ?
ಉತ್ತರ ಒಳನಾಡು ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ರೀತಿಯಲ್ಲಿ ಮಳೆಯಾಗುವ ಸಂಭವವಿದೆ. ಇಂದಿನಿಂದ ಸೆ.17ರವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸೆ.16ರಿಂದ HSRP ಕಡ್ಡಾಯ – ನಂಬರ್‌ಪ್ಲೇಟ್ ಅಳವಡಿಸದಿದ್ದರೇ 500 ರೂ. ದಂಡ