ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ ಈವರೆಗೂ 260ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 31 ಸಾವಿರಕ್ಕೂ ಹೆಚ್ಚು ಮನೆಗಳು, ಅಂಡಿಗಳು, ಗುಡಿಸಲುಗಳು ಹಾನಿಗೊಳಗಾಗಿವೆ.
2 ಸಾವಿರಕ್ಕೂ ಅಧಿಕ ರಸ್ತೆಗಳು ಕೊಚ್ಚಿಹೋಗಿದ್ದು, ಸಂಪರ್ಕ ಕಡಿತ ಗೊಂಡಿದೆ. 2,500ಕ್ಕೂ ಹೆಚ್ಚು ಕುಡಿಯುವ ನೀರಿನ ಸರಬರಾಜು ಯೋಜನೆಗಳಿಗೆ ಹಾನಿ ಆಗಿದೆ. 1,145 ವಿದ್ಯುತ್ ಸರಬರಾಜು ಘಟಕಗಳಿಗೂ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಕತ್ತಲೆ ಆವರಿಸಿದ್ದು, ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಎರಡು ಭಾರಿ ಮೇಘಸ್ಫೋಟ ಸಂಭವಿಸಿದೆ.ಇದನ್ನೂ ಓದಿ: ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್
ಹಠಾತ್ ಪ್ರವಾಹದಿಂದ ಮನೆಗಳು, ಕಟ್ಟಡಗಳು, ಮೂಲಸೌಕರ್ಯಗಳು ಕೊಚ್ಚಿಕೊಂಡು ಹೋಗಿವೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮುಂಬೈನಲ್ಲಿ ಕಳೆದ 3 ದಿನಗಳಿಂದ ಭಾರೀ ಮಳೆಯಾಗ್ತಿದೆ. ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಹಲವೆಡೆ ಟ್ರಾಫಿಕ್ ಜಾಮ್‌ನಿಂದ ಜನರು ಹೈರಾಣಾಗಿದ್ದು, ಮುಂಬೈನ ಉಪನಗರಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದ ನಾನಾ ಅವಾಂತರಗಳೂ ಸೃಷ್ಟಿಯಾಗಿದ್ದು, ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ- ಸಿ.ಪಿ.ರಾಧಾಕೃಷ್ಣನ್‌ಗೆ ಜೆಡಿಯು ಬೆಂಬಲ