– ಇನ್ನೂ ಎರಡು ದಿನ ಇರಲಿದೆ ಮಳೆಯಬ್ಬರ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಬ್ಬರ ಆರಂಭವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಮಧ್ಯರಾತ್ರಿಯಿಂದ ವರ್ಷಧಾರೆ ಆಗುತ್ತಿದ್ದು, ಬೆಳ್ಳಂಬೆಳಗ್ಗೆ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ವಾಹನ ಸವಾರರು ಹಾಗೂ ಕೆಲಸಕ್ಕೆ ತೆರಳುವವರಿಗೆ ಕಿರಿಕಿರಿಯುಂಟಾಗಿದೆ.
Advertisement
ಕಲಬುರಗಿ, ಚಿಕ್ಕಮಗಳೂರು, ಗದಗ, ಶಿವಮೊಗ್ಗ, ಹಾಸನ, ಕೋಲಾರ, ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಆಗ್ತಿದೆ. ಚಿತ್ತಾಪುರ ತಾಲೂಕಿನ ಬಳವಡಗಿಯಲ್ಲಿ ಜಮೀನು ಕೆಲಸಕ್ಕೆ ತೆರಳಿದ್ದ ಇಬ್ಬರು ಕೂಲಿ ಕಾರ್ಮಿಕರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತರನ್ನ ರಾಜ್‍ಅಹ್ಮದ್ ಮತ್ತು ಜಬ್ಬಾರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: RSS ನ 4 ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳಿದ್ದಾರೆ- ಬಿಜೆಪಿ ವಿರುದ್ಧ ಎಚ್‍ಡಿಕೆ ವಾಗ್ದಾಳಿ
Advertisement
Advertisement
ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಬಾಳೂರಲ್ಲಿ ಧಾರಾಕಾರ ಮಳೆ ಆಗಿದೆ. ಕಾಫಿನಾಡಲ್ಲಿ ಮಳೆಯಿಂದ ಕಾಫಿ ಉದುರುವ ಆತಂಕ ಕಾಫಿ ಬೆಳೆಗಾರರದ್ದು. ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ಆಟೋ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆಯಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ರಾಷ್ಟ್ರೀಯತೆಯ ಚಿಂತನೆಯನ್ನು ಬೆಳೆಸಿಕೊಂಡರೆ ಎಚ್‍ಡಿಕೆಗೆ ಹೊಟ್ಟೆ ಉರಿ ಯಾಕೆ: ಸೂಲಿಬೆಲೆ ಪ್ರಶ್ನೆ