ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಹಗುರದಿಂದ ಸಾಧಾರಣವಾಗಿ ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಹಾವೇರಿ,ಕಲಬುರ್ಗಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: 50 ಸಾವಿರ ಕುಟುಂಬಗಳಿಗೆ ತಲಾ 5 ಸಾವಿರ ಚೆಕ್ ವಿತರಣೆ: ಕೆಜಿಎಫ್ ಬಾಬು
Advertisement
Advertisement
ಮುಂದಿನ 48 ಘಂಟೆಗಳು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗಿನ,ಶಿವಮೊಗ್ಗ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ್, ಕೊಪ್ಪಲ್ನಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ,ಹಾಸನ, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ , ತುಮಕೂರು ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Advertisement
Advertisement
ಮೀನುಗಾರರಿಗೆ ಎಚ್ಚರಿಕೆ: ಕೇರಳ- ಕರ್ನಾಟಕ ಕರಾವಳಿ, ಲಕ್ಷದ್ವೀಪ ಪ್ರದೇಶ, ಮಾಲ್ಡೀವ್ಸ್ ಪ್ರದೇಶ ಮತ್ತು ಪಕ್ಕದ ಆಗ್ನೇಯ ಮತ್ತು ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಪ್ರವೇಶಿಸದಂತೆ ಸೂಚಿಸಲಾಗಿದೆ.