ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ತಿಂಗಳು ಮಳೆಯಾಗಲಿದೆ. ಈ ಮಳೆ(Rain) ಎದುರಿಸಲು ಜನ ಸಿದ್ಧರಾಗಬೇಕಿದೆ ಎಂದು ಹವಾಮಾನ (Weather) ತಜ್ಞ ಪ್ರಸಾದ್ ಎಚ್ಚರಿಕೆ ನೀಡಿದರು.
ಕಳೆದೊಂದು ವಾರದಿಂದ ಮಳೆಗೆ ತತ್ತರಿಸಿರುವ ಬೆಂಗಳೂರಲ್ಲಿ(Bengaluru) ಇನ್ನೂ 3 ತಿಂಗಳ ಕಾಲ ಮುಂದುವರಿಯಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ನವೆಂಬರ್‌ವರೆಗೂ ಮಳೆಯಾಗಲಿದೆ. ಒಟ್ಟಾರೆಯಾಗಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಸೆ. 1 ರಿಂದ ಇದುವರೆಗೂ 211 ಎಂ.ಎಂ ಮಳೆಯಾಗಿದೆ.
Advertisement
Advertisement
ಕರಾವಳಿಗೆ ಮುಂದಿನ 5 ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಗುಲ್ಬರ್ಗಾ, ಯಾದಗಿರಿ ಭಾಗದಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿಗೆ ಇಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇದನ್ನೂ ಓದಿ: ಪ್ರತಿ 44 ಸೆಕೆಂಡ್‍ಗೆ ಒಬ್ಬರಂತೆ ಕೊರೊನಾಗೆ ಬಲಿಯಾಗುತ್ತಿದ್ದಾರೆ – WHO
Advertisement
Advertisement
ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರಿಗೆ ಭಾರೀ ಮಳೆ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೂರು ದಿನದ ಬಳಿಕ ಮಳೆ ಪ್ರಮಾಣದಲ್ಲಿ ಕೊಂಚ ಇಳಿಕೆ ಸಾಧ್ಯತೆಯಿದೆ. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಹಿಂದೆ IT ಕಂಪನಿಗಳ ಕೈವಾಡವೂ ಇದೆ: ಸಂತೋಷ್ ಹೆಗ್ಡೆ