– ನಗರದಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ (Fengal Cyclone) ಬಿಸಿ ಬೆಂಗಳೂರಿಗೂ ತಟ್ಟಿದೆ. ಬೆಂಗಳೂರಿನಲ್ಲಿ (Bengaluru) ಜಿಟಿಜಿಟಿ ಮಳೆಯಾಗುತ್ತಿರುವ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.
ಮೆಜೆಸ್ಟಿಕ್, ಓಕಳಿಪುರಂ, ಮಾಗಡಿ ರೋಡ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ. ಸುಮಾರು ಒಂದು ಗಂಟೆಯಿಂದ ಜಾಮ್ ಉಂಟಾಗಿದ್ದು, ಕಿಲೋ ಮೀಟರ್‌ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿವೆ. ಮಳೆ ಮಧ್ಯೆ ವಾಹನ ಸವಾರರು ಟ್ರಾಫಿಕ್‌ನಲ್ಲಿ ಸಿಲುಕಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ನಿಜವಾದ ಕಾನೂನು ಪಾಲಕರಾಗಿದ್ರೆ ನಾನು ಸಾಷ್ಟಾಂಗ ನಮಸ್ಕಾರ ಮಾಡ್ತೇನೆ – ಅಶ್ವಥ್ ನಾರಾಯಣ
ಇನ್ನು ಹೆಬ್ಬಾಳ ಫ್ಲೈಓವರ್ ಮಾರ್ಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಿಮಾನ ನಿಲ್ದಾಣದಿಂದ ಹೆಬ್ಬಾಳದ ಕಡೆ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಆನೇಕಲ್ | ಸಿಲಿಂಡರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಗಂಭೀರ
ಎರಡು ದಿನದಿಂದ ಬಿಸಿಲು ಕಾಣದ ಸಿಲಿಕಾನ್ ಸಿಟಿ ಜನರಿಗೆ ಮತ್ತಷ್ಟು ಮಳೆಯ ಕಾಟ ಎದುರಾಗಲಿದ್ದು, ಮುಂದಿನ 2-3 ದಿನ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮಂಡ್ಯ, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಂಭವವಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಇದನ್ನೂ ಓದಿ: ಉತ್ತರ ಕನ್ನಡ| ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ದುರ್ಮರಣ
ಭಾನುವಾರ ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ?
ಚಾಮರಾಜನಗರ: 89 ಎಂಎಂ
ರಾಮನಗರ: 69 ಎಂಎಂ
ಮಂಡ್ಯ: 41 ಎಂಎಂ
ಬೆಂಗಳೂರು ಗ್ರಾಮಾಂತರ: 38 ಎಂಎಂ
ಕೋಲಾರ: 37 ಎಂಎಂ
ಮೈಸೂರು: 36 ಎಂಎಂ
ತುಮಕೂರು: 34 ಎಂಎಂ
ಚಿಕ್ಕಬಳ್ಳಾಪುರ: 38 ಎಂಎಂ
ಕೊಡಗು: 26 ಎಂಎಂ
ಬೆಂಗಳೂರು: 22 ಎಂಎ