– ಏ.19ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬುಧವಾರ ಸಂಜೆ ವರುಣನ (Rain) ಆಗಮನವಾಗಿದೆ. ಅರ್ಧ ಗಂಟೆ ಮಳೆ ಸುರಿದ ಪರಿಣಾಮ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಟ ನಡೆಸಿದ್ದಾರೆ.
ವೈಟ್ ಫೀಲ್ಡ್, ಜಯನಗರ, ಕೆಂಗೇರಿ ಸೇರಿದಂತೆ ಹಲವೆಡೆ ಮಳೆ ಸುರಿದಿದ್ದು, ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದೆ. ಮಲ್ಲೇಶ್ವರಂ, ಶಾಂತಿನಗರ, ರಾಜಾಜಿನಗರ, ಬನಶಂಕರಿ, ಜಯನಗರ ಮತ್ತು ಕೆಲವು ಭಾಗಗಳಲ್ಲಿ ಮಳೆಯಾಗಿದೆ. ವೈಟ್ ಫೀಲ್ಡ್, ವರ್ತೂರು ಭಾಗದಲ್ಲಿ ಜೋರು ಮಳೆಯಾಗಿದೆ. ಭಾರೀ ಮಳೆಯ ಪರಿಣಾಮ ವರ್ತೂರು ರಸ್ತೆ ಕೆರೆಯಂತಾಗಿದೆ. ಬೆಂಗಳೂರು ಸೇರಿದಂತೆ ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತಕ್ಕೆ ಬಂದ ಜಾತಿ ಜಿದ್ದಾಜಿದ್ದಿ – ಸಿಎಂ ಮುಂದಿರುವ ಆಯ್ಕೆ ಏನು?
ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏ.19ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್ ನಡೆದಿದೆ ಒಗ್ಗಟ್ಟಾಗಿ ಇರಿ: ಖರ್ಗೆ ಶಾಕಿಂಗ್ ಹೇಳಿಕೆ