ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ ಕೂಡ ಶಾಲಾ- ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಜುಲೈ 7 ರಂದು ಕೂಡ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದಾರೆ. ಇದನ್ನೂ ಓದಿ: ಕಾಳಿ ಕೈಯಲ್ಲಿ ಸಿಗರೇಟು ವಿವಾದ – ಹಿಂದೂಗಳ ಕ್ಷಮೆ ಕೋರಿದ ಟೊರೆಂಟೊ ಮ್ಯೂಸಿಯಂ
Advertisement
Advertisement
ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳು, ಅಂಗನವಾಡಿಯಿಂದ ಡಿಗ್ರಿ ಕಾಲೇಜ್, ಸ್ನಾತಕೋತ್ತರ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಘೋಷಣೆ ಮಾಡಿದ್ದಾರೆ. ಅಲ್ಲದೆ ನಾಳೆ ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಮೋದಿ ಟ್ವೀಟ್
Advertisement
Advertisement
ಇತ್ತ ಉಡುಪಿಯಲ್ಲಿ ಕೂಡ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜುಲೈ 7 ಗುರುವಾರ ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜಿಗೆ ರಜೆ ನೀಡಿ ಉಡುಪಿ ಡಿಸಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.