– ಉತ್ತರಪ್ರದೇಶ, ಉತ್ತರಾಖಂಡಕ್ಕೂ ಅಲರ್ಟ್
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮುಂದಿನ ಮೂರು ದಿನಗಳ ಕಾಲ ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ತಿಳಿಸಿದೆ.
Advertisement
ಮುಂದಿನ ಮೂರು ದಿನಗಳ ಕಾಲ ದೆಹಲಿ, ಉತ್ತರಪ್ರದೇಶ (Uttarpradesh) ಹಾಗೂ ಉತ್ತರಾಖಂಡದಲ್ಲಿ (Uttarakhand) ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗುರುವಾರ ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.ಇದನ್ನೂ ಓದಿ: ಮಾಧ್ಯಮಗಳನ್ನು ನೋಡಿ ಅಸಭ್ಯ ಸನ್ನೆ ಮಾಡಿದ ದರ್ಶನ್
Advertisement
Advertisement
ಹವಾಮಾನ ಇಲಾಖೆಯ ವರದಿ ಪ್ರಕಾರ ಉತ್ತರಾಖಂಡದಲ್ಲಿ ಸೆ.12 ರಿಂದ 14 ರವರೆಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
Advertisement
ಭಾರೀ ಮಳೆಯಿಂದಾಗಿ ಮಥುರಾದ (Mathura) ರಸ್ತೆಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಸಮಸ್ಯೆಯಿಂದ ಜನರು ಪರದಾಡುವಂತಾಗಿದೆ.
ದೆಹಲಿ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ಹೊರತುಪಡಿಸಿ, ಮಧ್ಯಪ್ರದೇಶದಲ್ಲಿ (Madhyapradesh) ಸೆ.14ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಸೆ.15ರವರೆಗೆ ಪೂರ್ವ ರಾಜಸ್ಥಾನದಲ್ಲಿ (Rajasthan) ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಐಎಂಡಿ (IMD) ತಿಳಿಸಿದೆ.ಇದನ್ನೂ ಓದಿ: ವಯನಾಡು ದುರಂತದಲ್ಲಿ ಕುಟುಂಬದ 9 ಮಂದಿಯನ್ನು ಕಳೆದುಕೊಂಡ್ಳು, ಈಗ ಮದುವೆಯಾಗಬೇಕಿದ್ದ ಹುಡುಗನೂ ಅಪಘಾತದಲ್ಲಿ ಸಾವು
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಧ್ಯಪ್ರದೇಶ ವಾಯುವ್ಯ ಹಾಗೂ ಉತ್ತರ ಪ್ರದೇಶದ ನೈಋತ್ಯ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.