ಮುಂದಿನ 4 ದಿನ ರಾಜ್ಯದಲ್ಲಿ ಮಳೆ

Public TV
1 Min Read
KARNATAKA RAIN

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಮಾಂಡೌಸ್ ಚಂಡಮಾರುತದ ಹಿನ್ನೆಲೆ ರಾಜ್ಯಾದ್ಯಂತ ಮಳೆ (Rain) ಸುರಿದಿದ್ದು, ಬಳಿಕ ವರುಣ ಸ್ವಲ್ಪ ಬಿಡುವು ನೀಡಿದ್ದ. ಇದೀಗ ಮಳೆರಾಯ ಮತ್ತೆ ರಾಜ್ಯಕ್ಕೆ ಲಗ್ಗೆಯಿಡುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂದಿನ 4 ದಿನ ರಾಜ್ಯದ (Karnataka) ಹಲವೆಡೆ ಸಾಧಾರಣ ಮಳೆಯಾಗಲಿದೆ. ಮಳೆ ದಕ್ಷಿಣ ಒಳನಾಡನ್ನು ಕಾಡಲಿದ್ದು, ಬೆಂಗಳೂರು (Bengaluru) ಸೇರಿದಂತೆ ದಕ್ಷಿಣ ಒಳನಾಡಿದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

bengaluru rain1

ಇಂದು ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಮಳೆ ಸುರಿಯುವ ಸಾಧ್ಯತೆಯಿರುವುದರಿಂದ ಸಿಲಿಕಾನ್ ಸಿಟಿಯಲ್ಲಿ ಇನ್ನೂ 2 ದಿನ ಕೂಲ್ ಕೂಲ್ ವೆದರ್ ಮುಂದುವರಿಯಲಿದೆ. ಇದನ್ನೂ ಓದಿ: ಗದಗಿನ ಕಾವೇಂಶ್ರೀಯನ್ನು ಪ್ರಶಂಸಿಸಿದ ಮೋದಿ

BNG RAIN

ಇಂದು ಹಾಗೂ ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯಿದೆ. ಕೊನೆಯ 2 ದಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ರೆಡ್ಡಿ ಪಕ್ಷದಿಂದ ಬಿಜೆಪಿಗೆ ಸಂಕಷ್ಟ ಆಗುತ್ತಾ? – ಅಂಕಿ ಸಂಖ್ಯೆ ಏನು ಹೇಳುತ್ತೆ?

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *