ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆ (Rain) ಆಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ಪ್ರಾರಂಭವಾಗಿದ್ದು, ಬಿಸಿಲಿನ ಧಗೆ ಹೆಚ್ಚುತ್ತಿರುವ ನಡೆವೆಯೂ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆಯಿದ್ದು, ಮಂಗಳವಾರದಿಂದ 5 ದಿನ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಚುನಾವಣೆಗೆ ಸ್ಪರ್ಧಿಸಲು ಗೂಳಿಹಟ್ಟಿ ಶೇಖರ್‌ಗೆ ದೇಣಿಗೆ ನೀಡಿದ ಮತದಾರರು
Advertisement
Advertisement
ಮಾ.14 ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆ ಬರಲಿದ್ದು, ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆ ಆಗಲಿದೆ.
Advertisement
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಸಾಧಾರಣ ಮಳೆ ಆಗುವ ಸಂಭವವಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಕೋರ್ಟ್‌ನಲ್ಲಿ ಇಂದು 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಅರ್ಜಿ ವಿಚಾರಣೆ