– ಮಡಿಕೇರಿಯಲ್ಲಿ ಶಾಲೆ ಓಪನ್
ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಅಬ್ಬರಿಸಿದ್ದ ಮಳೆರಾಯ ಸ್ವಲ್ಪ ಬಿಡುವಿನ ಬಳಿಕ ಇದೀಗ ಮತ್ತೆ ರಾಜ್ಯಾದ್ಯಂತ ಅಬ್ಬರಿಸಲಿದ್ದಾನೆ. ಹಾಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಡಗು, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂಬರುವ 24 ಗಂಟೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ಇತರ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಹೇಳಿದೆ.
Advertisement
Advertisement
ಭಾರೀ ಮಳೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿತ್ತು. ಈಗ ಮಳೆ ಕೊಂಚ ಕಡಿಮೆಯಾಗಿರೋದರಿಂದ ಇಂದಿನಿಂದ ಶಾಲೆಗಳು ಆರಂಭಗೊಳ್ಳಲಿದೆ. ಪ್ರಕೃತಿ ವಿಕೋಪಕ್ಕೆ ಸಿಲುಕಿ ತೊಂದರೆಗೊಳಗಾದವರಿಗಾಗಿ ತೆರೆಯಲಾಗಿರೋ ಶಾಲೆಗಳು, ಅಂಗನವಾಡಿ ಬಿಟ್ಟು ಉಳಿದೆಲ್ಲ ಶಾಲೆಗಳು ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.
Advertisement
ಭೀಕರ ಪ್ರವಾಹಕ್ಕೆ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಪ್ರವಾಹದಿಂದಾಗಿರುವ ನಷ್ಟದಿಂದ ಮನನೊಂದು ನದಿಗೆ ಜಿಗಿದಿದ್ದ ಮಹಿಳೆ ಮೂರು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾರೆ. ಹುನಗುಂದ ತಾಲೂಕಿನ ರಾಮಥಾಳ ಗ್ರಾಮದ 65 ವರ್ಷದ ರೇಣುಕಾ ಯರನಾಳ ಮೃತ ಮಹಿಳೆಯಾಗಿದ್ದು, ಈಕೆಯ ಶವ ರಾಮಥಾಳದಿಂದ 2 ಕಿಲೋ ಮೀಟರ್ ದೂರದ ಬೇನಾಳ ಬಳಿ ನದಿಯಲ್ಲಿಪತ್ತೆಯಾಗಿದೆ.
Advertisement