ಬೆಂಗಳೂರು: ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗಿದ್ದು, ಬುಧವಾರವೂ ಮಳೆಯಾಗುವ (Rain) ಸಾಧ್ಯತೆಯಿದೆ.
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ಧಗೆ ಹೆಚ್ಚುತ್ತಿರುವುದರ ನಡುವೆಯೂ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ ಎಂದು ಮಂಗಳವಾರ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
Advertisement
Advertisement
ಇದೀಗ ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಂತ ಬುಧವಾರ ಮೋಡದ ವಾತಾವರಣ ಇದ್ದು, ಇಂದು ಮತ್ತು ನಾಳೆ ಜಿಲ್ಲೆಯಲ್ಲಿ ಮಳೆ ಸುರಿಯುವ ಸೂಚನೆಯನ್ನು ಹವಾಮಾನ (Weather) ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಬಿಸಿ ವಾತಾವರಣದ ನಡುವೆ ಆಕಾಶದಲ್ಲಿ ಮೋಡಗಟ್ಟಿದ ವಾತಾವರಣ ಇದೆ. ಮಂಗಳವಾರವೂ ಕೂಡ ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಆಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆ
Advertisement
Advertisement
ಮಂಗಳವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಇನ್ನೂ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಆಸುಪಾಸಿನಲ್ಲಿ ಮಂಗಳವಾರ ಆಲಿಕಲ್ಲು ಸಹಿತ ಮಳೆಯಾಗಿದೆ. ಇದನ್ನೂ ಓದಿ: ಕಮಲ ಹುಟ್ಟುವುದು ಕೆಸರಲ್ಲಿ, ಅರಳಿದ ಮೇಲೆ ಮುದುಡಲೇ ಬೇಕು – ಸುರೇಶ್‌ಗೌಡ