ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ.
ಬೆಂಗಳೂರಲ್ಲಿ ನಿನ್ನೆ ಮಧ್ಯಾಹ್ನದ ವೇಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದ್ದ ವರುಣ, ರಾತ್ರಿ ಪುನಃ ಧಾರಾಕಾರವಾಗಿ ಸುರಿದಿದ್ದಾನೆ. ಮೆಜೆಸ್ಟಿಕ್, ಮಾಗಡಿರೋಡ್, ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ಲಗ್ಗೆರೆ, ಯಶವಂತಪುರ ಸೇರಿದಂತೆ ಹಲವೆಡೆ ರಸ್ತೆಯಲ್ಲಿ ನೀರು ನಿಂತು ಜನರು ಪರದಾಡುವಂತಾಯಿತು.
Advertisement
ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಕರಾವಳಿ ಭಾಗ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಒಟ್ಟಿನಲ್ಲಿ ಬಿರುಬೇಸಿಗೆಯಿಂದ ಬಳಲಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಜೊತೆಗೆ ಹಲವು ಅವಾಂತರಗಳನ್ನು ಸೃಷ್ಟಿಸಿದ್ದಾನೆ.