ಬೆಂಗಳೂರು: ಕಳೆದ 2 ವಾರಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆರಾಯ ನವರಾತ್ರಿಯ ಸಂಭ್ರಮದ ನಡುವೆ ಮತ್ತೆ ರಾಜ್ಯಕ್ಕೆ (Karnataka) ಲಗ್ಗೆಯಿಡಲಿದ್ದಾನೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಈದ್ಗಾದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಸಂಘಟನೆಗಳ ಪಟ್ಟು
ಇಂದಿನಿಂದ ಸೆಪ್ಟೆಂಬರ್ 29ರ ವರೆಗೆ ಮಳೆಯಾಗಲಿದ್ದು, ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ದಸರಾ ವೇಳೆ RSS, BJP ನಾಯಕರ ಮೇಲೆ ದಾಳಿಗೆ PFI ಸಂಚು