ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ತಂಪಾದ ವಾತಾವರಣ ಇದ್ದು, ವರುಣಾಗಮನದ ಮುನ್ಸೂಚನೆ ನೀಡಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದರೆ ಕೆಲವೆಡೆ ತುಂತುರು ಮಳೆಯಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂಓದಿ: ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ ಕೇಸ್ – 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ವರ್ತೂರು, ಬ್ರೂಕ್‌ಫೀಲ್ಡ್, ಮಹದೇವಪುರ, ವೈಟ್‌ಫೀಲ್ಡ್, ಕಲ್ಯಾಣ ನಗರ, ಮಾರತ್ತಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಬನಶಂಕರಿ, ಬಿಟಿಎಂ ಲೇಔಟ್, ಕೊತ್ನೂರು, ಗೊಟ್ಟಿಗೆರೆ, ಟಿಸಿ ಪಾಳ್ಯ, ಕೆಆರ್ ಪುರ, ಕುಮಾರಸ್ವಾಮಿ ಲೇಔಟ್, ಉತ್ತರಹಳ್ಳಿ, ಹೆಚ್‌ಎಸ್‌ಆರ್ ಲೇಔಟ್, ಮಡಿವಾಳ, ಹುಳಿಮಾವು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ತುಂತುರು ಮಳೆಯಾಗಿದೆ. ಇದನ್ನೂಓದಿ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ನಾಳೆ ಭಾರತಕ್ಕೆ ಭೇಟಿ