ಬೆಂಗಳೂರು: ಬೆಂಗಳೂರು: ರಾಜ್ಯದ ಹಲವೆಡೆ ಅಕಾಲಿಕ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು ಅಪಾರ ಹಾನಿ ಆಗಿದೆ. ಇಲ್ಲಿಯವರೆಗೆ 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
Advertisement
658 ಮನೆಗಳಿಗೆ ಸಂಪೂರ್ಣ ಹಾನಿ, 8,498 ಮನೆಗಳಿಗೆ ಭಾಗಶಃ ಹಾನಿ ಆಗಿದೆ. 191 ಜಾನುವಾರಗಳು ಸಾವನ್ನಪ್ಪಿವೆ. 5 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆನಾಶವಾಗಿದ್ದು, 30,114 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. 2,203 ಕಿಮೀ ರಸ್ತೆ ಹಾಳಾಗಿದ್ದು, 165 ಸೇತುವೆಗಳಿಗೆ ಹಾನಿ ಆಗಿದೆ. 1,225 ಶಾಲಾ ಕಟ್ಟಡಗಳು, 39 ಪ್ರಾಥಮಿಕ ಆರೋಗ್ಯ ಕೇಂದ್ರ, 1,674 ವಿದ್ಯುತ್ ಕಂಬಗಳು, 278 ವಿದ್ಯುತ್ ಟ್ರಾನ್ಸ್‌ಫರ್‌ಗಳಿಗೆ ಹಾನಿ ಆಗಿದೆ. ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ವರದಿಯಾಗಿದೆ.
Advertisement
Advertisement
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ 3.43 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಬಾಕಿ ಇದ್ದ 79 ಸಾವಿರ ರೈತರಿಗೆ 52 ಕೋಟಿ ರೂ. ಕೂಡಲೇ ಬಿಡುಗಡೆ ಮಾಡುವಂತೆ ಸಿಎಂ ಬೊಮ್ಮಾಯಿ ಸೂಚಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಹಾನಿ ಪರಿಹಾರ ಕಾರ್ಯಕ್ಕೆ ಪ್ರತಿ ವಲಯಕ್ಕೆ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅನಾಹುತ – ರಾಜಕಾಲುವೆ ಒಡೆದು ರಸ್ತೆ, ಮನೆಗಳಿಗೆ ನುಗ್ಗಿದ ನೀರು
Advertisement
ಇನ್ನೂ ಕಳೆದ ರಾತ್ರಿ ಬೆಂಗಳೂರಿನಲ್ಲಿ ಸಹ ಭಾರೀ ಮಳೆಯಾಗಿದ್ದು, ಹಲವಾರು ರಸ್ತೆಗಳು ಜಲಾವೃತಗೊಂಡಿದೆ. ಮತ್ತೊಂದೆಡೆ ರಾಜಕಾಲುವೆವೊಂದು ಒಡೆದು ಅನೇಕ ಮನೆಗಳಿಗೆ ನೀರು ನುಗ್ಗಿದೆ. ಒಟ್ಟಾರೆ ಅಕಾಲಿಕ ಮಳೆಗೆ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಇದನ್ನೂ ಓದಿ: ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ