ನವದೆಹಲಿ: ದೆಹಲಿ (Delhi Rain) ಮತ್ತು ಎನ್‌ಸಿಆರ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ಸಾಧಾರಣದಿಂದ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ದೆಹಲಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಹಗಲಿನಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.
ದೆಹಲಿಯಲ್ಲಿ ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ಈ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿರುವುದನ್ನು ಸೂಚಿಸುತ್ತದೆ. ಮುಂದಿನ ಏಳು ದಿನಗಳ ಕಾಲ ದೆಹಲಿ ಮತ್ತು ಎನ್‌ಸಿಆರ್‌ನ ಹಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ತೀವ್ರತೆಯ ಮಳೆ ಮುಂದುವರಿಯುತ್ತದೆ ಎಂದು ಐಎಂಡಿ ತಿಳಿಸಿದೆ. ಇದನ್ನೂ ಓದಿ: ರಾಜ್ಯದ ಕರಾವಳಿಯಲ್ಲಿ ಮಳೆಯಬ್ಬರ- ಮೈದುಂಬಿದ ನದಿಗಳು, ಜಮೀನು ಜಲಾವೃತ
ದೆಹಲಿ ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ, ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ಕೆಲವು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 25 ಡಿಗ್ರಿ ಸೆಲ್ಸಿಯಸ್‌ನಲ್ಲಿ ಸುಳಿದಾಡುವ ಸಾಧ್ಯತೆಯಿದೆ.
ಇನ್ನು ದೆಹಲಿಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ದಾಖಲಾಗಿದೆ. ಮಾರ್ಚ್‌ನಲ್ಲಿ ಸಾಮಾನ್ಯ ಮಳೆಯ ಪ್ರಮಾಣ 17.4 ಮಿಮೀ ಇದ್ದು, ಈ ಬಾರಿ 53.2 ಮಿಮೀ ಮಳೆಯಾಗಿದೆ. ಏಪ್ರಿಲ್‌ನಲ್ಲಿ ಸರಾಸರಿ 16.3 ಮಿಮೀ ಇದ್ದು 20.1 ಮಿಮೀ, ಮೇನಲ್ಲಿ ಸಾಮಾನ್ಯ 30.7 ಮಿಮೀ ಇದ್ದು 111 ಮಿಮೀ ಮಳೆಯಾಗಿದೆ. ಜೂನ್‌ನಲ್ಲಿ 74.1 ಮಿಮೀ ಬದಲಿಗೆ 101.7 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದನ್ನೂ ಓದಿ: ಕೆಜಿ ಟೊಮೆಟೊಗೆ 200 ರೂ., ಮೆಣಸಿನಕಾಯಿಗೆ 170 ರೂ. – ತರಕಾರಿಗಳ ಬೆಲೆ ಭಾರೀ ದುಬಾರಿ!
Web Stories