ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡ ಹಿನ್ನೆಲೆ ಇಂದು ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯ ಸಿಂಚನವಾಗಿದೆ.
ನಗರದ ಜಾಲಹಳ್ಳಿ, ಚಿಕ್ಕಬಾಣಾವರ ಸೇರಿದಂತೆ ಹಲವೆಡೆ ಮಳೆಯಾಗಿದೆ. ನೆಲಮಂಗಲದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ಇನ್ನು ದಿಢೀರ್ ಮಳೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡಿದ್ದಾರೆ.
Advertisement
Radar shows light rains over parts of North #Bengaluru, Nelamangala.. moderate rains over parts of #Magadi pic.twitter.com/HL1H2ihdXc
— Bengaluru Weather (@BngWeather) March 29, 2018
Advertisement
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎರಡು ದಿನ ಮಳೆಯಾಗುವ ಸಾಧ್ಯತೆಗಳಿವೆ ಅಂತಾ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ಬೆಳಗ್ಗೆ ಮಾಹಿತಿ ನೀಡಿದ್ದರು.
Advertisement
ಕೆಲವು ದಿನಗಳ ಹಿಂದೆಯೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿತ್ತು. ಇಂದು ಮತ್ತು ನಾಳೆ ಎರಡು ದಿನ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗುವ ಸಂಭವವಿದೆ.
Advertisement
Chances of rains in other parts too in coming hours
— Bengaluru Weather (@BngWeather) March 29, 2018