ಬೆಂಗಳೂರು: ರಾಜ್ಯದಲ್ಲಿ 5 ದಿನಗಳ ಕಾಲ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದ (Maharastra) ಪಶ್ಚಿಮ ಭಾಗದಿಂದ ದಕ್ಷಿಣ ಒಳನಾಡಿನತ್ತ ಬೀಸುತ್ತಿರುವ ಗಾಳಿಯ ಪರಿಣಾಮ ಮುಂದಿನ ಐದು ದಿನಗಳು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿದೆ. ಅಲ್ಲದೇ ಕರಾವಳಿಯಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆ ಮನೆ ಮನೆ ತಲುಪುತ್ತಿದೆ: ಡಿಕೆ ಶಿವಕುಮಾರ್
Advertisement
Advertisement
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಎಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
Advertisement
Advertisement
ಏ.29ರಂದು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಏ.30ರಂದು ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆ ಕಂಡು ಬಂದಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದಾಗ ಬ್ರೇಕ್ ಫೈಲ್ – ಟ್ರಕ್ ಹೊಡೆತಕ್ಕೆ 12 ಕಾರುಗಳು ನಜ್ಜುಗುಜ್ಜು