ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಭಾರೀ ಮಳೆಯಾಗುತ್ತಿದ್ದು, ಶುಕ್ರವಾರವೂ ವರುಣ ಎಂಟ್ರಿಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ನಾಲ್ಕೈದು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಜನ ನಿಟ್ಟುಸಿರು ಬಿಡುವಂತಾಗಿದೆ. ಇದನ್ನೂ ಓದಿ: ಕರ್ನಾಟಕ ಬಿಜೆಪಿ ಐಟಿ ಸೆಲ್ ಸಂಚಾಲಕ ಪ್ರಶಾಂತ್ ಮಾಕನೂರು ಅರೆಸ್ಟ್
Advertisement
Advertisement
ಇಂದು ಬಸವನಗುಡಿ, ಚಾಮರಾಜಪೇಟೆ, ಕಾರ್ಪೊರೇಷನ್, ಟೌನ್ ಹಾಲ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಯಶವಂತಪುರ ಸುತ್ತಮುತ್ತ ಮಳೆಯಾಗುತ್ತಿದೆ. ದೊಡ್ಡ ಬಿದರಕಲ್ಲು 41.50 ಮಿ.ಮೀ, ನಂದಿನಿ ಲೇಔಟ್ 19 ಮಿ.ಮೀ, ಮರಪ್ಪನ ಪಾಳ್ಯ 18 ಮಿ.ಮೀ, ನಾಗಪುರ 17 ಮೀ.ಮೀ, ಬಗಲಗುಂಟೆ 16 ಮಿ.ಮೀ, ಕೊಟ್ಟಿಗೆಪಾಳ್ಯ 15 ಮಿ.ಮೀ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ 13.50 ಮಿ.ಮೀ, ಹಂಪಿನಗರ 11 ಮಿ.ಮೀ. ಮಾರುತಿ ಮಂದಿರ 10.50 ಮಿ.ಮೀ ಮಳೆಯಾಗಿದೆ.
Advertisement
ನೆಲಮಂಗಲ ಸುತ್ತಮುತ್ತ ಕೂಡ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಟ ಅನುಭವಿಸಿದರು. ರಸ್ತೆಯಲ್ಲಿ ಒಂದು ಅಡಿ ಮಳೆಯ ನೀರು ನಿಂತಿದೆ. ಈ ಹಿನ್ನೆಲೆಯಲ್ಲಿ ನೆಲಮಂಗಲದ ಅರಿಶಿನಕುಂಟೆ, ಮಾಕಳಿ, ಮಾದನಾಯಕನಹಳ್ಳಿ ಬಳಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗುತ್ತಿದೆ. ಹೀಗಾಗಿ ರೈತರ ಮೊಗದಲ್ಲಿಯೂ ಸಂತಸ ಮೂಡಿದೆ.